ವರ್ತಮಾನ ಬಳಗದ ಪುಟ್ಟ ಸಮಾಗಮ, ಎಸ್.ಆರ್.ಹಿರೇಮಠ್ ಮತ್ತು ಕಥಾಸ್ಪರ್ಧೆಯ ವಿಜೇತರೊಂದಿಗೆ…

ಆತ್ಮೀಯರೇ,

ಮೊನ್ನೆ ನಮ್ಮ ವರ್ತಮಾನ ಬಳಗವರು ಮತ್ತು ಕೆಲವು ಸ್ನೇಹಿತರು ಈ ಬಾರಿಯ (೨೦೧೪) ಗಾಂಧಿ ಜಯಂತಿ ಕಥಾಸ್ಪರ್ಧೆಯಲ್ಲಿ ಬಹುಮಾನಿತ ಕತೆಗಳನ್ನು ಬರೆದಿರುವ ಕೆಲವು ಕತೆಗಾರರೊಂದಿಗೆ ಊಟಕ್ಕೆಂದು ಸೇರಿದ್ದೆವು. ಕಥಾಸ್ಪರ್ಧೆಯ ಮೊದಲ ಮೂರು ಬಹುಮಾನಿತ ಕತೆಗಳನ್ನು ಬರೆದಿರುವ ಕತೆಗಾರರು ಮತ್ತು ಈ ಬಾರಿಯ ತೀರ್ಪುಗಾರರು ಅಂದು ಬೆಂಗಳೂರಿನಲ್ಲಿ ಇರುತ್ತಾರೆ ಎನ್ನುವ ಕಾರಣಕ್ಕೆ ಈ ಪುಟ್ಟ ಸಮಾಗಮ. ಹಾಗೆಯೇ, ನಮ್ಮ ರಾಜ್ಯದ ವರ್ಷದ ವ್ಯಕ್ತಿಯಾಗಿ ನಮ್ಮ ವರ್ತಮಾನ ಬಳಗ ಆಯ್ಕೆ ಮಾಡಿದ್ದ ಎಸ್.ಆರ್.ಹಿರೇಮಠರೂ ನೆನ್ನೆ ಬೆಂಗಳೂರಿನಲ್ಲಿ ಇದ್ದರು. ಸಾಧ್ಯವಾದರೆ ಅವರ ಜೊತೆ ಸ್ವಲ್ಪ ಸಮಯ ಕಳೆದು ನಮ್ಮ ಕತೆಗಾರರಿಗೆ ಅವರಿಂದಲೇ ಬಹುಮಾನ ವಿತರಣೆ ಮಾಡಿಸಬೇಕೆಂದು ಅಂದುಕೊಂಡಿದ್ದೆವು.

ಬೆಂಗಳೂರಿನ ಗಾಂಧಿನಗರದಲ್ಲಿರುವ ಬಸಂತ್ ರೆಸಿಡೆನ್ಸಿ ಹೋಟೆಲ್‌ನಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳದ ರೊಟ್ಟಿ ಊಟ ಸಿಗುತ್ತದೆ. ಅಲ್ಲಿ ಸೇರಿದ್ದೆವು. katha-sprade-2014-223x300ನಮ್ಮ ವರ್ತಮಾನ.ಕಾಮ್‌ನೊಂದಿಗೆ ಮೊದಲಿನಿಂದಲೂ ಬೆನ್ನೆಲುಬಾಗಿ ನಿಂತಿರುವ ನಾಲ್ಕೈದು ಜನ ಬೆಂಗಳೂರಿನ ಹೊರಗೆಯೇ ಇರುವುದರಿಂದ ಅವರು ಪಾಲ್ಗೊಳ್ಳಲಾಗಲಿಲ್ಲ ಮತ್ತು ನಗರದಲ್ಲಿಯೇ ಇರುವ ಇನ್ನೂ ಕೆಲವರು ಕಾರ್ಯಬಾಹುಳ್ಯದಿಂದಾಗಿ ಬರಲಾಗಲಿಲ್ಲ. ಬರಬೇಕಾಗಿದ್ದ ಈ ಬಾರಿಯ ತೀರ್ಪುಗಾರರಾಗಿದ್ದ ಎಸ್.ಗಂಗಾಧರಯ್ಯನವರೂ ಬರಲಾಗಿರಲಿಲ್ಲ. ಅವರನ್ನು ಬಿಟ್ಟರೆ ಒಟ್ಟಾರೆಯಾಗಿ ನಮ್ಮ ಬಳಗದ ಬಹುತೇಕರು ಹಾಜರಿದ್ದರು.

ಊಟದ ನಂತರ ಎಸ್.ಆರ್.ಹಿರೇಮಠರು ಹಾಜರಿದ್ದ ಕರೆಗಾರರಾದ ಟಿ.ಎಸ್.ವಿವೇಕಾನಂದ, ಟಿ.ಕೆ.ದಯಾನಂದ್, ಮತ್ತು ಎಚ್.ಎಸ್.ಅನುಪಮರಿಗೆ ಬಹುಮಾನಗಳನ್ನು ಕೊಟ್ಟರು. ಕಳೆದ ಬಾರಿಯ ತೀರ್ಪುಗಾರರಾಗಿದ್ದ ರಾಮಲಿಂಗಪ್ಪ ಟಿ.ಬೇಗೂರುರವರು ಈ ಸಂದರ್ಭದಲ್ಲಿ ಹಾಜರಿದ್ದು, ಬಹಳ ಆಪ್ತ ವಾತಾವರಣದಲ್ಲಿ, ಒಂದು ರೀತಿಯಲ್ಲಿ ಖಾಸಗಿಯಾಗಿ ಇದು ಮುಗಿಯಿತು.

ಈ ಪುಟ್ಟ ಸಮಾಗಮಕ್ಕೆ ಆಗಮಿಸಿದ್ದ ಎಸ್.ಆರ್.ಹಿರೇಮಠ್, ಡಾ.ರಾಮಲಿಂಗಪ್ಪ ಟಿ.ಬೇಗೂರು, ಟಿ.ಎಸ್.ವಿವೇಕಾನಂದ ಮತ್ತು ಕುಟುಂಬದವರು, ಟಿ.ಕೆ.ದಯಾನಂದ್, ಡಾ.ಎಚ್.ಎಸ್.ಅನುಪಮ, ಬಿ.ಶ್ರೀಪಾದ ಭಟ್, ಜಯಶಂಕರ ಹಲಗೂರು, ಆನಂದ ಯಾದವಾಡ ಮತ್ತು ಕುಟುಂಬದವರು, ರವಿ ಮತ್ತು ಕುಟುಂಬದವರು, ಈಶ್ವರ್ ಮತ್ತು ಕುಟುಂಬದವರು, ಫ್ರಭಾ ಎನ್. ಬೆಳವಂಗಲ, ನವೀನ್ ಸೂರಿಂಜೆ, ತೇಜ ಸಚಿನ್ ಪೂಜಾರಿ, ಡಾ. ಅಶೋಕ್ ಕೆ,ಆರ್., ಅನಂತ ನಾಯ್ಕ, ಶಾಂತಲಾ ದಾಮ್ಲೆ, ಪ್ರಶಾಂತ್ ಹುಲ್ಕೋಡು, ಚಂದ್ರಶೇಖರ ಬೆಳಗೆರೆ, ಬಸವರಾಜು, ಶ್ರೀಧರ್ ಪ್ರಭು, ನಿತಿನ್, ಬಸೂ ಸೂಳಿಬಾವಿ ಮತ್ತವರ ಸ್ನೇಹಿತರು- ಎಲ್ಲರಿಗೂ ವರ್ತಮಾನ ಬಳಗದಿಂದ ಧನ್ಯವಾದ ಮತ್ತು ಕೃತಜ್ಞತೆಗಳು.

ಮತ್ತೊಮ್ಮೆ ಬಂದ ಎಲ್ಲಾ ಸ್ನೇಹಿತರಿಗೂ ಬಳಗದ ಪರವಾಗಿ ಧನ್ಯವಾದಗಳು.

ನಮಸ್ಕಾರ,
ರವಿ
ವರ್ತಮಾನ ಬಳಗದ ಪರವಾಗಿ.

vartamana_spardhe_1

 

vartamana_spardhe_2

2 thoughts on “ವರ್ತಮಾನ ಬಳಗದ ಪುಟ್ಟ ಸಮಾಗಮ, ಎಸ್.ಆರ್.ಹಿರೇಮಠ್ ಮತ್ತು ಕಥಾಸ್ಪರ್ಧೆಯ ವಿಜೇತರೊಂದಿಗೆ…

  1. ನಾಗಶೆಟ್ಟಿ ಶೆಟ್ಕರ್

    ರವಿ ಅವರೇ, ಸಮಾರಂಭ ಚೆನ್ನಾಗಿ ನಡೆದದ್ದು ಕೇಳಿ ಸಂತಸವಾಯಿತು. ಬಹುಮಾನಿತರಿಗೆ ಅಭಿನಂದನೆಗಳು. ನಿಮ್ಮನ್ನು ಖಾದಿ ದ್ರೆಸ್ಸಿನಲ್ಲಿ ನೋಡಿ ಶಾಂತವೇರಿ ಗೌಡರ ನೆನಪಾಯಿತು ನೋಡಿ! ಅವರಂತೆ ಧೀಮಂತ ಜನಪರ ರಾಜಕಾರಣಿ ಆಗಿ ನೀವು ಬೆಳೆಯಬೇಕು. ನಿಮಗೆ ಒಳ್ಳೆಯದಾಗಲಿ.

    Reply
  2. nudi

    ನಮ್ಮೂರಿನ ಆನಂದ ಯಾದವಾಡ ಸರ್ ಅದಾರ ಅಂದ್ರ ಸಾಲಾಪೂರ ಇದ್ದಂಗನ…. ಕಥೆಗಾರರಿಗೆ ಅಭಿನಂದನೆಗಳು

    Reply

Leave a Reply to ನಾಗಶೆಟ್ಟಿ ಶೆಟ್ಕರ್ Cancel reply

Your email address will not be published. Required fields are marked *