ಸಾಮಾಜಿಕ ಜಾಲತಾಣ ಹಾಗೂ ಮುಸ್ಲಿಮ್ ಮಹಿಳೆಯರ ಪ್ರಾತಿನಿಧ್ಯ


-ಇರ್ಷಾದ್ ಉಪ್ಪಿನಂಗಡಿ


ಅಲ್ಲಾರಿ, ನಿಮ್ಮ ಮುಸ್ಲಿಮ್ ಯುವಕರು ಸಾಮಾಜಿಕ ಜಾಲ ತಾಣಗಳಲ್ಲಿ ತುಂಬಾ ಆಕ್ಟ್ವೀವ್ ಆಗಿ ಗುರುತಿಸಿಕೊಳ್ತಾರೆ, ಆದ್ರೆ ಮುಸ್ಲಿಮ್ ಮಹಿಳೆಯರು ಇಲ್ಲಿ ಯಾಕೆ ಕಾಣಿಸಿಕೊಳ್ತಿಲ್ಲ?  ನನ್ನ ಜೊತೆ ಮಾತನಾಡುವ ಅನೇಕ ಸ್ನೇಹಿತರು ನನ್ನಲ್ಲಿ ಕೇಳುವ ಸಹಜ ಪ್ರೆಶ್ನೆ. ಹೌದಲ್ವಾ, ಅಂತinidan-muslim-woman ಕುತೂಹಲಕ್ಕಾಗಿ ನಾನು ನನ್ನ ಫೇಸ್ ಬುಕ್ ಖಾತೆಯಲ್ಲಿ ಎಷ್ಟು ಮುಸ್ಲಿಮ್ ಮಹಿಳೆಯರು ಸ್ನೇಹಿತರಾಗಿದ್ದಾರೆ ಎಂದು ಚೆಕ್ ಮಾಡಿದೆ. ನನ್ನ ಸುಮಾರು ಮೂರು ಸಾವಿರ ಸ್ನೇಹಿತರ ಪೈಕಿ ಮುಸ್ಲಿಮ್ ಮಹಿಳೆಯರ ಸಂಖ್ಯೆ ಕೇವಲ ಆರು! ಈ ಪೈಕಿ ಎಷ್ಟು ಖಾತೆಗಳು ಅಸಲಿ ಅಥವಾ ಎಷ್ಟು ಖಾತೆಗಳು ನಕಲಿ ಎಂಬುವುದನ್ನು ನನಗೆ ಇದುವರೆಗೂ ಕಂಡುಹಿಡಿಯೋದಕ್ಕೆ ಸಾಧ್ಯವಾಗಿಲ್ಲ. ಕಾರಣ, ಖಾತೆ ಹೊಂದಿದವರ ಪ್ರೊಫೈಲ್ ಫೋಟೋವಾಗಲಿ ಇತರ ಮಾಹಿತಿಗಳಾಗಲಿ ಅಲ್ಲಿಲ್ಲ. ಆದ್ರೆ ನನ್ನ ಫೇಸ್ ಬುಕ್ ಖಾತೆಯ ಸ್ನೇಹಿತರಲ್ಲಿ ಇತರ ಧರ್ಮೀಯ ಮಹಿಳೆಯರ ಸಂಖ್ಯೆ ಬರೋಬ್ಬರಿ 400 ಕ್ಕೂ ಅಧಿಕ!

ಹಿಂಗ್ಯಾಕೆ ಅಂತ ನೀವು ತಲೆಕೆಡೆಸಿಕೊಂಡಿರಬಹುದು. ಆದ್ರೆ ನನಗೆ ಇದ್ರಲ್ಲಿ ಆಶ್ವರ್ಯ ಏನೂ ಅನ್ನಿಸೋದಿಲ್ಲ. ಬದಲಾಗಿ ಖೇಧ ಅನ್ನಿಸುತ್ತದೆ. ಕೆಲವು ತಿಂಗಳ ಹಿಂದೆ ಒಬ್ಬರು ಮುಸ್ಲಿಮ್ ಮಹಿಳೆ ನನ್ನ ಫೇಸ್ ಬುಕ್ ಖಾತೆಗೆ ಫ್ರೆಂಡ್ ರಿಕ್ವೆಸ್ಟ್ ಕಲುಹಿಸಿದ್ದರು. ಅವರ ಹೆಸರು ಉಮ್ಮು ರವೂಫ್ ರಹೀನಾ. ಅವರ ಮುಖಪುಟವನ್ನು ಗಮನಿಸಿದಾಗ ನನಗೆ ತುಂಬಾನೆ ಆಶ್ವರ್ಯವಾಯಿತು. ನನ್ನ ಫೇಸ್ ಬುಕ್ 6 ಮುಸ್ಲಿಮ್ ಗೆಳತಿಯರ ಪೈಕಿ ಇವರೊಬ್ಬರೇ ತಮ್ಮ ಪ್ರೊಫೈಲ್ ಫೋಟೋವನ್ನು ಹಾಕಿದ್ದರು. ಅವರ ಎಫ್.ಬಿ ವಾಲ್ ನೋಡ್ತಾ ಹೋದಂತೆ ಸಾಕಷ್ಟು ಪ್ರಗತಿಪರ ಬರಹಗಳು ಅಲ್ಲಿ ಕಂಡುಬಂದವು. ಧರ್ಮದ ಹೆಸರಲ್ಲಿ ನಡೆಯುತ್ತಿರುವ ಮೂಲಭೂತವಾದ, ಕೋಮುವಾದ, ಮಹಿಳಾ ಶೋಷಣೆಯ ವಿರುದ್ಧ ಧೈರ್ಯವಾಗಿ, ಲಾಜಿಕ್ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದರು ರಹೀನಾ. ಕುತೂಹಲಕಾರಿ ವಿಚಾರವೆಂದರೆ ಇವರ ಸ್ಟೇಟಸ್ಗೆ ಬರುತ್ತಿರುವ ಕಾಮೆಂಟ್ಗಳು ಮಾತ್ರ ಅಸಹನೀಯ.

ಅಲ್ಲಿರುವ ಮುಸ್ಲಿಮ್ ಯುವಕರ ಬಹುತೇಕ ಕಾಮೆಂಟ್ಗಳು ರಹೀನಾ ತಮ್ಮ ಪ್ರೊಫೈಲ್ನಲ್ಲಿ ಫೋಟೋ ಹಾಕಿದಕ್ಕಾಗಿ. ಜೊತೆಗೆ ಅವರ ಪ್ರಗತಿಪರ ಲಾಜಿಕ್ ಅಭಿಪ್ರಾಯಗಳಿಗೆ ಉತ್ತರ ನೀಡಲು ಸಾಧ್ಯವಾಗದಾಗ ಕೋಪದಿಂದ ಅವರ ಮೇಲೆ ಮುಗಿಬೀಳುತ್ತಿದ್ದರು. ಬಹುತೇಕ ಕಾಮೆಂಟ್ಗಳ ಒತ್ತಾಯ ಒಂದೇ ಮುಸ್ಲಿಮ್ ಮಹಿಳೆಯಾಗಿ ಫೇಸ್ ಬುಕ್ ಪ್ರೊಫೈಲ್ನಲ್ಲಿ ನಿನ್ನ ಫೋಟೋ ಹಾಕಿರೋದು ಧರ್ಮ ಬಾಹಿರ  ಎಂದು. ಫೋಟೋ ಹಾಕಿರೋದು ಅಲ್ಲದೆ ಧರ್ಮದ ಬಗ್ಗೆ ಮೂಲಭೂತವಾದದ ಕುರಿತಾಗಿ ಪ್ರಶ್ನಿಸಿದರೆ ಪರಿಸ್ಥಿತಿ ನೆಟ್ಟಗಿರೋದಿಲ್ಲ ಎಂಬ ಬೆದರಿಕೆಗಳು. ಹೀಗೆ ರಹೀನಾ ಮೇಲೆ ಮುಗಿಬಿದ್ದ ಯುವಕರ ಪ್ರೋಫೈಲ್ಗಳನ್ನು ನಾನು ಕುತೂಹಲಕ್ಕಾಗಿ  ಗಮನಿಸುತ್ತಿದ್ದೆ. ಅಬ್ಬಬ್ಬಾ,  ಅದೆಷ್ಟು ಅಂದ ಚೆಂದದ ಫೋಟೋಗಳು, ನಿಂತು ಕುಂತು, ಬೈಕ್ ಮೇಲೆ ಕೂತು, ಕಾರ್ ಮುಂದೆ ನಿಂತು ಬೇರೆ, ಹೀಗೆ ಭಿನ್ನ ವಿಭಿನ್ನ ಪೋಸುಗಳಿಂದ ಕೂಡಿದ ಪೋಟೋಗಳು ಅಲ್ಲಿ ರಾರಾಜಿಸುತ್ತಿದ್ದವು. ಇದಕ್ಕೆಲ್ಲಾ ನಿನ್ನ ಧರ್ಮ ಅನುಮತಿ ಕೊಡುತ್ತಾ ಎಂದು ಪ್ರಶ್ನಿಸಿದರೆ ಅವರಲ್ಲಿ ಉತ್ತರವೇ ಇಲ್ಲ. ಮುಸ್ಲಿಮ್ ಮಹಿಳೆಯೊಬ್ಬಳು ಹೀಗೆ ಬಹಿರಂಗವಾಗಿ ಪ್ರೆಶ್ನೆ ಮಾಡ್ತಿದ್ದಾರಲ್ಲಾ ಅಂತ ನಾನು ಖುಷಿ ಪಟ್ರೆ, ಕೊನೆಗೊಂದು ದಿನ ರಹೀನಾ ಫೇಸ್ ಬುಕ್ ಎಕೌಂಟ್ ಇದ್ದಕ್ಕಿದಂತೆ ನಾಪತ್ತೆಯಾಗೋದಾ!

ಮುಸ್ಲಿಮ್ ಮಹಿಳೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ನೀವು ಮಿಂಚಿದಾಗ ಆದಂತಹಾ ಅನುಭವಗಳೇನು ಎಂದು ರಹೀನರಲ್ಲಿ ಮಾತನಾಡಿದಾಗ  ನನ್ನ ಇನ್ ಬಾಕ್ಸ್ ಗೆ ಕೆಟ್ಟ ಕೆಟ್ಟ ಬೆದರಿಕೆಯ ಮೆಸೇಜ್ಗಳು ಬರುತ್ತಿದ್ದವು. ಫೋಟೋ ಯಾಕೆ ಹಾಕ್ತಿಯಾ ಅಂತ ಮುಗಿಬೀಳುತ್ತಿದ್ದರು. ಹೀಗೆ ಫೋಟೋ ಹಾಕೋದು, ಧರ್ಮದ ಬಗ್ಗೆ ಪ್ರಶ್ನಿಸೋದನ್ನು ಮುಂದುವರಿಸಿದ್ರೆ ಪರಿಣಾಮ ನೆಟ್ಟಗಿರೋದಿಲ್ಲ, ಮಹಿಳೆ ಹೇಗಿರಬೇಕು ಹಾಗೆಯೇ ಇರಬೇಕೆಂಬ ಬೆದರಿಕೆ ಕರೆಗಳೂ ಸಾಮಾನ್ಯವಾಗಿದ್ದವು. ಅನಿವಾರ್ಯವಾಗಿ ಖಾತೆಯ ಪ್ರೊಫೈಲ್ನಿಂದ ನನ್ನ ಪೋಟೋವನ್ನು ಡಿಲಿಟ್ ಮಾಡಬೇಕಾಗಿ ಬಂತು.  ಕೊನೆಗೊಂದು ದಿನ ನನ್ನ ಫೇಸ್ ಬುಕ್ ಖಾತೆ ಇದ್ದಕಿದ್ದಂತೆ ಬ್ಲಾಕ್ ಆಗೋಯ್ತು.

ರಹೀನಾ ಕೇವಲ ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರವಲ್ಲ  ಸನ್ಮಾರ್ಗ ವಾರ ಪತ್ರಿಕೆಗೆ ಲೇಖನಗಳನ್ನುsocial_media ಬರೆದು ಕಳುಹಿಸುತ್ತಿದ್ದರು. ಜಮಾತೇ ಇಸ್ಲಾಮಿ ಹಿಂದ್ ಎಂಬ ಮುಸ್ಲಿಂ ಸಂಘಟನೆಯ ಅಧೀನದಲ್ಲಿರುವ ವಾರ ಪತ್ರಿಕೆಯಿದು. ಆರಂಭದಲ್ಲಿ ಇವರು ಬರೆದ ಲೇಖನಗಳು ಸನ್ಮಾರ್ಗದಲ್ಲಿ ಪ್ರಕಟವಾಗುತಿತ್ತು. ಆದರೆ ಯಾವಾಗ ರಹೀನಾ ಧರ್ಮದ ಹುಳುಕುಗಳನ್ನು ಬಹಿರಂಗವಾಗಿ ಪ್ರಶ್ನಿಸಲು ಶುರುಮಾಡಿದ್ರೋ, ಸಾಮಾಜಿಕ ಜಾಲತಾಣಗಳಲ್ಲಿ ಇವರಿಗೆ ವಿರೋಧ ವ್ಯಕ್ತವಾಗತೊಡಗಿದ್ವೋ, ಪ್ರಗತಿಪರ ಎಂದು ಬಿಂಬಿಸಿಕೊಳ್ಳೋ ಪ್ರಯತ್ನ ಮಾಡುತ್ತಿರುವ ಜಮಾತೇ ಇಸ್ಲಾಮೀಯ ವಾರ ಪತ್ರಿಕೆ ಸನ್ಮಾರ್ಗದಲ್ಲಿ ರಹೀನಾ ಲೇಖನ ಪ್ರಕಟನೆಗೆ ಅವಕಾಶ ನಿರಾಕರಿಸಲಾಯಿತು. ಇನ್ನು ದಲಿತ ಪರ, ಅಲ್ಪಸಂಖ್ಯಾತರ ಪರ, ಅಭಿವ್ಯಕ್ತಿಯ ಪರ ಹಾಗೂ ಮಹಿಳಾ ಪರ ಧ್ವನಿ ಎಂದು ಬಿಂಬಿಸಿಕೊಳ್ಳುವ ಕನ್ನಡ ದಿನಪತ್ರಿಕೆಯೊಂದರಲ್ಲೂ ರಹೀನಾ ಕೆಲಸ ಕಳೆದುಕೊಳ್ಳಬೇಕಾಯಿತು.

ಜೋಹಾ ಕಬೀರ್. ಎಂಜಿನಿಯರ್ ಪಧವೀಧರೆ ಮುಸ್ಲಿಮ್ ಯುವತಿ. ಈಕೆಯ ಸ್ಥಿತಿ ಇದಕ್ಕಿಂತ ಭಿನ್ನವೇನಿಲ್ಲ. ಸಾಮಾಜಿಕ ಜಾಲ ತಾಣಗಳಲ್ಲಿ ಖಾತೆಹೊಂದಲು, ತನ್ನ ಪ್ರೋಫೈಲ್ನಲ್ಲಿ  ಭಾವಚಿತ್ರ ಹಾಕಿಕೊಳ್ಳಲು ಹಾಗೂ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಲು ಇವರಿಗೆ ಪೋಷಕರ-ಪತಿಯ ವಿರೋಧವೇನಿಲ್ಲ. ಆದರೆ  ಸಾಮಾಜಿಕ ಜಾಲತಾಣಗಳಲ್ಲಿರುವ ಮುಸ್ಲಿಮ್ ಯುವಕರಿಗೆ ಸಮುದಾಯದ ಹೆಣ್ಣುಮಕ್ಕಳ ಮೇಲೆ ಎಲ್ಲಿಲ್ಲದ ಕಾಳಜಿ! ಪ್ರೋಫೈಲ್ ಫೋಟೋ ಹಾಕಿದಕ್ಕಾಗಿಯೇ ಇವರಿಗೂ ಕೊಟ್ಟ ಕಿರುಕುಳ ಅಷ್ಟಿಷ್ಟಲ್ಲ. ಒತ್ತಡ ಹೆಚ್ಚಾಗಿ ಇವರೂ ತಮ್ಮ ಪ್ರೋಫೈಲ್ ಪೋಟೋವನ್ನು ಕಿತ್ತುಹಾಕಬೇಕಾಗಿ ಬಂತು. ಇನ್ನು ತನ್ನ ಪತಿಯ ಜೊತೆ ಮದುವೆ ದಿನದ ಪೋಟೋವನ್ನು ಫೇಸ್ ಬುಕ್ ಖಾತೆಯಲ್ಲಿ ಹಾಕಿದಾಗ ಅದಕ್ಕೂ ವಿರೋಧ. ತನ್ನ ಪತಿಯ ಜೊತೆ ನಿಂತ ಪೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಸ್ವಾತಂತ್ಯ್ರವೂ ನನಗಿಲ್ಲ. ನನ್ನಂತೆಯೇ ಅನೇಕ ಗೆಳತಿಯರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮನ್ನು ಗುರುತಿಸಿಕೊಳ್ಳಲು ಬಯಸುತ್ತಾರೆ, ಆದರೆ ಅದಕ್ಕೆ ಎದುರಾಗುತ್ತಿರುವ ವಿರೋಧ ನಮ್ಮೆನ್ನೆಲ್ಲಾ ಸೋಷಿಯಲ್ ಮಿಡಿಯಾಗಳಿಂದ ದೂರ ಉಳಿದುಕೊಳ್ಳುವಂತೆ ಮಾಡಿದೆ ಅಂತಿದ್ದಾರೆ ಜೋಹಾ ಕಬೀರ್. ಜೋಹಾರದ್ದೇ ಕಥೆ ಆಕೆಯ ಇತರ ಮುಸ್ಲಿಮ್ ಗೆಳತಿಯರದ್ದು.

ನಾಲ್ಕು ವರ್ಷಗಳ ಹಿಂದೆ ಮುಬೀನಾ (ಹೆಸರು ಬದಲಾಯಿಸಲಾಗಿದೆ) ಎಂಬ  ವೈದ್ಯಕೀಯ ಶಿಕ್ಷಣ ಓದುತ್ತಿದ್ದUpload-Facebook-photo ಮುಸ್ಲಿಮ್ ಯುವತಿ ಫೇಸ್ ಬುಕ್ ನಲ್ಲಿ ತುಂಬಾ ಆಕ್ವೀವ್ ಆಗಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಪ್ರೊಫೈಲ್ ನಲ್ಲಿ ತಮ್ಮ ಪೋಟೋವನ್ನು ಹಾಕಿಕೊಂಡಿದ್ದರು. ಮುಕ್ತವಾಗಿ ಮೂಲಭೂತವಾದ, ನೈತಿಕ ಪೊಲೀಸ್ ಗಿರಿಯ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿಸುತ್ತಿದ್ದರು. ಆದ್ರೆ ಕೆಲವೇ ದಿನಗಳಲ್ಲಿ ಮೂಲಭೂತವಾದಿಗಳ ಕೆಂಗಣ್ಣಿಗೆ ಅವರು  ಗುರಿಯಾಗಬೇಕಾಯಿತು. ಇಷ್ಟಾದರೂ, ಸಾಮಾಜಿಕ ಜಾಲತಾಣಗಳ ಬೆದರಿಕೆಗೆ ಜಗ್ಗದ ಮುಬೀನಾ ಮನೆಗೆ ಮೂಲಭೂತವಾದಿ ಪುಂಡರ ಗುಂಪು ಹೋಗಿ ಎಚ್ಚರಿಕೆ ನೀಡಿ ಫೇಸ್ ಬುಕ್ ಖಾತೆಯನ್ನೇ ಸ್ಥಗಿತಗೊಳಿಸಿಬಿಟ್ಟರು ಅಂತಾರೆ ಡಿ.ವೈ.ಎಫ್.ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ. ಮುನೀರ್ ಕಾಟಿಪಳ್ಳ ಸಾಮಾಜಿಕ ಜಾಲ ತಾಣಗಳಲ್ಲೂ ತುಂಬಾನೇ ಆಕ್ಟೀವ್ ಆಗಿ ತಮ್ಮನ್ನು ತೊಡಗಿಸಿಕೊಂಡಿರುವ ವ್ಯಕ್ತಿ. ವರ್ಷದ ಹಿಂದೆ ಅವರು ಪತ್ನಿ ಶಬಾನಾ ಜೊತೆಗಿದ್ದ ಪೋಟೋವನ್ನು ಫೇಸ್ ಬುಕ್ ನಲ್ಲಿ  ಹಾಕೊಂಡಿದ್ದರು. ತಮಾಷೆಯಂದ್ರೆ ಮುಸ್ಲಿಮ್ ಮೂಲಭೂತವಾದಿ ಹುಡುಗರು ಅದಕ್ಕೂ ವಿರೋಧ ವ್ಯಕ್ತಪಡಿಸಿದ್ದರು.

ಇದನ್ನು ಮೀರಿ ಮುಸ್ಲಿಮ್ ಹೆಣ್ಣುಮಕ್ಕಳು ಸೋಷಿಯಲ್ ಮೀಡಿಯಾಗಳಲ್ಲಿ ಮುಂದುವರಿದರೆ, ಅವರ ಹೆಸರಲ್ಲಿ ಫೇಕ್ ಖಾತೆಗಳನ್ನು ತೆರೆದು ಅಶ್ಲೀಲ ವಿಡಿಯೋಗಳನ್ನು ಟ್ಯಾಗ್ ಮಾಡಲಾಗುತ್ತದೆ. ಅಥವಾ ಕೆಟ್ಟ ಮೆಸೇಜ್ಗಳನ್ನು ಹರಿಯಬಿಡಲಾಗುತ್ತದೆ. ಇಂಥಹಾ ಅನೇಕ ಕೀಳುಮಟ್ಟದ ಕಿರುಕುಳದ ಅನುಭವಗಳು ಈ ಮೇಲಿನ ಎಲ್ಲಾ ಮಹಿಳೆಯರಿಗಾಗಿದೆ. ಈ ಮೂಲಕ ಸಾಮಾಜಿಕ ಜಾಲ ತಾಣಗಳಿಂದ ಅವರನ್ನು ಹೊರದಬ್ಬುವ ಪ್ರಯತ್ನವನ್ನು ಮೂಲಭೂತವಾದಿಗಳು ಮಾಡ್ತಿದ್ದಾರೆ. ಇನ್ನೊಂದೆಡೆ ಹಿಂದೂ ಪರ ಸಂಘಟನೆಗಳು ಲವ್ ಜಿಹಾದ್ ಭಯಹುಟ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿರುವ ಹಿಂದೂ ಹೆಣ್ಣುಮಕ್ಕಳನ್ನು ನಿಯಂತ್ರಿಸುವ ಪ್ರಯತ್ನ ನಡೆಸುತ್ತಿರುವುದು ಕೂಡಾ ಗಮನಿಸಬೇಕಾದ ವಿಚಾರ.

ಈ ಹಿಂದೆ ಮುಸ್ಲಿಮ್ ಹೆಣ್ಣುಮಕ್ಕಳಿಗೆ ವಿದ್ಯಾಬ್ಯಾಸ ಪಡೆಯಲೂ ಅವಕಾಶವಿರಲಿಲ್ಲ. ಸಾರಾ ಅಬೂಬಕ್ಕರ್ ಅಂತಹಾ ಅನೇಕ ದಿಟ್ಟ ಮಹಿಳೆಯರ ಹೋರಾಟದ ಫಲವೆಂಬುವಂತೆ ಇಂದು ಮುಸ್ಲಿಮ್ ಹೆಣ್ಣುಮಕ್ಕಳು ಉತ್ತಮ ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ. ಆದರೆ ಸಮಾಜದಲ್ಲಿ ತಮ್ಮನ್ನು ಗುರುತಿಸಿಕೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲ. ಅವರು ಏನೂ ಸಾಧನೆ ಮಾಡಬೇಕಾದ್ರೂ ಅದು ಬುರ್ಖಾದೊಳಗಡೆಗೆ ಮಾತ್ರ ಸೀಮಿತ ಎಂಬ ವಾದದಲ್ಲಿ ಇಂದಿಗೂ ಯಾವುದೇ ಬದಲಾವಣೆಯಾಗಿಲ್ಲ. ಇದನ್ನು ಮೀರಿ ಕೆಲವೊಂದು ಮುಸ್ಲಿಮ್ ಮಹಿಳೆಯರು ಸಮಾಜದಲ್ಲಿ ತಮ್ಮನ್ನು ತಾವು ಗುರುತಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ತಮ್ಮ ಅಭಿವ್ಯಕ್ತಿಯ ಹಕ್ಕನ್ನು ಪಡೆದುಕೊಳ್ಳುವ ಪ್ರಯತ್ನ ಅಲ್ಲೊಂದು ಇಲ್ಲೊಂದರಂತೆ ನಡೆಯುತ್ತಿದೆ. ಧರ್ಮದ ಹೆಸರಲ್ಲಿ ಸಾಮಾಜಿಕ ಜಾಲ ತಾಣಗಳಲ್ಲಿ ಮುಸ್ಲಿಂ ಮಹಿಳೆಯರ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಾಗುವುದನ್ನು ಮುಸ್ಲಿಮ್ ಸಮಾಜದ ಪ್ರಜ್ಞಾವಂತರು ಗಮನಿಸಬೇಕಿದೆ.

6 thoughts on “ಸಾಮಾಜಿಕ ಜಾಲತಾಣ ಹಾಗೂ ಮುಸ್ಲಿಮ್ ಮಹಿಳೆಯರ ಪ್ರಾತಿನಿಧ್ಯ

  1. anonsuf

    ಬಹಳ ಅರ್ಥವತ್ತಾಗಿದೆ !!!

    ಸ್ಪಷ್ಟೀಕರಣ : ರಹೀನಾರವರು ವಿದೇಶ ಹೋಗುವ ನಿಮಿತ್ತ ಪತ್ರಿಕೆ ಬಿಟ್ಟು ಹೋಗಿರೋದು … ರಹೀನಾರವರನ್ನೇ ಕೇಳಿ …
    ಪತ್ರಿಕೆಯಿಂದ ಹೊರಹಾಕಿರೋದು ಅಲ್ಲ !

    Reply
  2. ಸೀತಾ

    ಮಾನ್ಯರೇ, ಇರ್ಶಾದ್ ಅವರ ಲೇಖನ ಹಾಗೂ ಅದಕ್ಕೆ ಬಂದಿರುವ ಪ್ರತಿಕ್ರಿಯೆಗಳನ್ನು ಗಮನಿಸಿದ್ದೇನೆ. ಆಗ ಕಂಡುಬಂದದ್ದು ಇದು: ಹಿಂದೂಗಳನ್ನೂ ಹಿಂದೂ ಸಂಘಟನೆಗಳನ್ನೂ ಬ್ರಾಹ್ಮಣರನ್ನೂ ತೆಗಳಿ ಬರೆಯುವ ಎಲ್ಲಾ ಲೇಖನಗಳಿಗೂ ತಪ್ಪದೇ ಪ್ರತಿಕ್ರಿಯಿಸುವ ಸಲಾಂ ಬಾವ ಅವರು ತಮ್ಮ ಸಮುದಾಯದ ವಿಕೃತಿಯನ್ನು ಟೀಕಿಸುವ ಪ್ರಸ್ತುತ ಲೇಖನಕ್ಕೆ ಪ್ರತಿಕ್ರಿಯಿಸುವ ಗೋಜಿಗೇ ಹೋಗಿಲ್ಲ! ಇಂದು ಚಾಲ್ತಿಯಲ್ಲಿರುವ ಸೆಕ್ಯೂಲರಿಸಂ ಅನ್ನು ಬಾವ ಅವರ ನಡತೆಯಲ್ಲಿ ಕಾಣಬಹುದಾಗಿದೆ.

    Reply
  3. ಸೀತಾ

    “ಮದ್ರಸ ,ಮೌಲವಿ ಗಳ ಕುರಿತಾಗಿ ನಿಮಗೇನು ತಿಳಿದಿದೆ ?ಅಲ್ಲಿ ನೀಡುವ ಲೌಕಿಕ ಮತ್ತು ಪಾರಮಾರ್ಥಿಕ ಶಿಕ್ಷಣ ,ಬ್ರಾತತ್ವ ,ಶಾಂತಿ ,ಪರಸ್ಪರ ಸ್ನ್ಹೇಹ ,ಕುರಿತು ಮೊದಲು ತಿಳಿದು ಅನಂತರ ಬೊಗಳೆ ಬಿಡಿ !”

    ಸಲಾಂ ಬಾವ ಅವರೇ, ಮುಸಲ್ಮಾನರು ಪ್ರಬಲರಾಗಿರುವ ಕೇರಳ ರಾಜ್ಯದ ಮದ್ರಸಾಗಳಲ್ಲಿ ಮಕ್ಕಳ ಲೈಂಗಿಕ ಶೋಷಣೆ ಅವ್ಯಾಹತವಾಗಿ ನಡೆದಿದೆ. ಹೆಣ್ಣುಮಕ್ಕಳನ್ನಷ್ಟೇ ಅಲ್ಲ ಗಂಡು ಮಕ್ಕಳನ್ನೂ ಮದ್ರಸಾಗಳ ಉಸ್ತಾದರು ಬಿಡಲಿಲ್ಲ. ಇದನ್ನು ಮುಸ್ಲಿಂ ಪತ್ರಕರ್ತೆ ರಾಜೀನಾ ಎಕ್ಸ್ ಪೋಸ್ ಮಾಡಿದರು. ತದನಂತರ ಆಕೆಗೆ ಮುಸ್ಲಿಂ ಮತಾಂಧರು ಜೀವ ಬೆದರಿಕೆಯನ್ನು ಒಡ್ಡಿದರು. ಆಕೆಯ ಫೇಸ್ಬುಕ್ ಖಾತೆಯನ್ನು ಒತ್ತಡ ಹೇರಿ ಮುಚ್ಚಿಸಲಾಯಿತು. ಇಷ್ಟೆಲ್ಲಾ ಆದಮೇಲೂ ಆಕೆಯ ಪರವಾಗಿ ಒಂದೂ ಮುಸ್ಲಿಂ ಸಂಘಟನೆಯಾಗಲಿ ಒಬ್ಬನೂ ಮುಸ್ಲಿಂ ನೇತಾರನಾಗಲಿ ಮದ್ರಸಾಗಳಲ್ಲಿ ನಡೆಯುತ್ತಿರುವ ಲೈಂಗಿಕ ಶೋಷಣೆಯ ಬಗ್ಗೆ ಪ್ರತಿಭಟಿಸಿಲ್ಲ!

    ಬಾವ ಅವರೇ, ಸಮಾಜದ ಆಗು ಹೋಗುಗಳ ಬಗ್ಗೆ ಅಪಾರ ಕಾಳಜಿ ಇರುವ ನೀವಾದರೂ ರಾಜೀನಾರನ್ನು ಬೆಂಬಲಿಸಿ ಮದ್ರಸಾಗಳಲ್ಲಿ ಲೈಂಗಿಕ ಶೋಷಣೆಗೆ ಒಳಗಾದ ಮಕ್ಕಳಿಗೆ ನ್ಯಾಯ ಸಿಗುವಂತೆ ಆಗ್ರಹ ಪಡಿಸಬೇಕು. ಮದ್ರಸಾ ಲೈಂಗಿಕ ಶೋಷಣೆ ಬಗ್ಗೆ ಆಮೂಲಾಗ್ರ ತನಿಖೆಗೆ ಶೀಘ್ರವೇ ಒತ್ತಾಯಪಡಿಸಬೇಕು.

    Reply
  4. ಸೀತಾ

    ನಮ್ಮ ರಾಜ್ಯದ ಎಡಪಂಥೀಯರಿಗೆ ಕೇರಳದ ಬಗ್ಗೆ ವಿಶೇಷ ವ್ಯಾಮೋಹ ಹಾಗೂ ಗೌರವ. ಎಡಪಂಥೀಯ ರಾಜಕಾರಣ ಕೇರಳದಲ್ಲಿ ಭದ್ರವಾಗಿ ಬೇರು ಬಿಟ್ಟಿರುವುದು ಇದ್ದಕ್ಕೊಂದು ಕಾರಣ. ತಮಾಷೆ ಏನೆಂದರೆ ಕೇರಳದಲ್ಲಿ ಮತೀಯ ರಾಜಕಾರಣವೂ ಭದ್ರವಾಗಿ ಬೇರು ಬಿಟ್ಟಿದೆ. ಕೇರಳದಲ್ಲಿ ಮುಸ್ಲಿಂ ಲೀಗ್ ಅಥವಾ ಕೇರಳ ಕಾಂಗ್ರೆಸ್ ಬೆಂಬಲವಿಲ್ಲದೆ ಕಮ್ಯುನಿಷ್ಟರಾಗಲಿ ಕಾಂಗ್ರೆಸ್ ಐ ಆಗಲಿ ಸರಕಾರ ನಡೆಸಲು ಸಾಧ್ಯವಿಲ್ಲ. ಮುಸ್ಲಿಂ ಲೀಗ್ ಜೊತೆಗೆ ತನ್ನನ್ನು ಗುರುತಿಸಿಕೊಂಡಿರುವ ಅಬೂಬಕ್ಕರ್ ಎಂಬ ಪ್ರಮುಖ ಸುನ್ನಿ ನಾಯಕನೊಬ್ಬ ಮಹಿಳಾ ಸ್ವಾತಂತ್ರ್ಯ ಹಾಗೂ ಅಧಿಕಾರದ ವಿಷಯದ ಬಗ್ಗೆ ಇಸ್ಲಾಂ ದೃಷ್ಟಿಕೋನವನ್ನು ಬಹಳ ಸಮಯದಿಂದ ಪ್ರಚುರಪಡಿಸುತ್ತಾ ಬಂದಿದ್ದಾನೆ. ಈತ ಇತ್ತೀಚಿಗೆ “it is not possible to have gender equality as it is anti-Islam, antihuman and anti-intellect” ಅಂತ ಹೇಳಿದನೆಂದು ಹಿಂದೂ ಪತ್ರಿಕೆಯಲ್ಲಿ ವರದಿಯಾಗಿದೆ. ಈತನ ಪ್ರಕಾರ “the demand to permit boys and girls sit side by side in colleges is a conspiracy against Islam”. ಮದ್ರಸಾಗಳಲ್ಲಿ ನಡೆಯುತ್ತಿರುವ ಸಣ್ಣ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯನ್ನು ರಾಜೀನಾ ಎಂಬಾಕೆ ಇತ್ತೀಚಿಗೆ ಎಕ್ಸ್ ಪೋಸ್ ಮಾಡಿ ಮತಾಂಧರ intoleranceಗೆ ತುತ್ತಾಗಿ ಜೀವಭೀತಿಯಿಂದ ಬದುಕುವ ಪರಿಸ್ಥಿತಿ ಉದ್ಭವಿಸಿತ್ತು. ಸುನ್ನಿ ಮುಸಲ್ಮಾನರ ನಾಯಕನೆಂದೇ ಹೆಸರು ಮಾಡಿರುವ ಅಬೂಬಕ್ಕರ್ ರಾಜೀನಾಳಿಗೆ ಅಭಯ ನೀಡುವುದಿರಲಿ ಆಕೆ ಸುಳ್ಳನ್ನು ಹೇಳುತ್ತಿದ್ದಾಳೆ ಎಂದಿದ್ದಾನೆ. ಇಷ್ಟೆಲ್ಲಾ ಅಸಹಿಷ್ಣುತೆ ಕಣ್ಣ ಮುಂದೆ ಜರುಗುತ್ತಿದ್ದರೂ ಕೇರಳದ ಎಡಪಂಥೀಯ ಬುದ್ಧಿಜೀವಿಗಳು ರಾಜೀನಾಳ ಪರವಾಗಲಿ ಅಬೂಬಕ್ಕರನ ವಿರೋಧವಾಗಲಿ ಒಂದು ಪತ್ರಿಕಾ ಘೋಷ್ಟಿಯನ್ನೂ ಜುಲೂಸನ್ನೂ ವಾಪಸಿಯನ್ನೂ ಮಾಡದೆ ತಮ್ಮ ಸೆಕ್ಯೂಲರ್ ನಿಷ್ಠೆ ಯಾರಿಗೆ ಅಂತ ಧೃಡಪಡಿಸಿದ್ದಾರೆ.

    Reply
    1. ಸೀತಾ

      ಈ ಅಬೂಬಕ್ಕರ್ ಎಂಬ ಸುನ್ನಿ ನೇತಾರ ಕಳೆದ ವರ್ಷ ಬಹುಪತ್ನಿತ್ವವನ್ನು ಸಮರ್ಥಿಸಿಕೊಂಡಿದ್ದ. ಮುಸಲ್ಮಾನ ಗಂಡಸಿಗೆ ಒಬ್ಬಳೇ ಹೆಂಡತಿ ಇದ್ದರೆ ಆಕೆಯ ಪೀರಿಯಡ್ಸ್ ಟೈಮಿನಲ್ಲಿ ಸಂಭೋಗ ಮಾಡಲಿಕ್ಕೆ ಸಾಧ್ಯವಾಗದಿಲ್ಲ ಎಂಬುದೇ ಬಹುಪತ್ನಿತ್ವಕ್ಕೆ ಅಬೂಬಕರ್ ಕೊಡುವ ಸಮರ್ಥನೆ!! ಬಹುಶ ಸಲಾಂ ಬಾವ ಅವರಿಗೂ ಅಬೂಬಕ್ಕರ್ ಕೊಟ್ಟ ಸಮರ್ಥನೆ ಸರಿ ಎಂದೇ ಅನಿಸಿದೆ. ಹಿಂದೂ ಸಮುದಾಯಗಳ ವಿಕೃತಿಗಳ ಬಗ್ಗೆ ಸದಾ ಟೀಕೆ ಮಾಡುವ ಬಾವ ಅವರು ನೆರೆಯ ಅಬೂಬಕ್ಕರನ ಪ್ರತಿಗಾಮಿತ್ವವನ್ನು ಮೌನದಿಂದ ಒಪ್ಪಿಕೊಂಡಿದ್ದಾರೆ.

      Reply

Leave a Reply

Your email address will not be published. Required fields are marked *