ಪೋಲೀಸ್ ಪ್ರತಿಭಟನೆ : ಒಂದು ಬದಿಯಲ್ಲಿ ನಪುಂಸಕತ್ವ, ಮತ್ತೊಂದು ಬದಿಯಲ್ಲಿ ಪುರುಷತ್ವ

– ಬಿ.ಶ್ರೀಪಾದ ಭಟ್

ನವೀನ್ ಸೂರಂಜೆಯವರು ’ಪೋಲೀಸ್ ಪ್ರತಿಭಟನೆ’ ಕುರಿತಾಗಿ ಬರೆಯುತ್ತಾ ಅನೇಕ ಪ್ರಶ್ನೆಗಳನ್ನು ಎತ್ತಿದ್ದಾರೆ. ಆದರೆ ಅವರೇ ಸ್ವತ ತಮ್ಮ ಪ್ರಶ್ನೆಗಳ ಸುಳಿಗೆ ಬಲಿಯಾಗಿದ್ದಾರೆ. ನೋಡಿ ಅವರು ಪದೇ ಪದೇ ಪ್ರಭುತ್ವದ ಪದವನ್ನು ಬಳಸುತ್ತಾರೆ. ಆದರೆ ಈ ಪ್ರಭುತ್ವ ಮತ್ತು ಪ್ರಜೆ ಎನ್ನುವ ಸಂಘರ್ಷದ ಚರ್ಚೆ ತುಂಬಾ ಹಳೆಯದು ನಮ್ಮ ಮಿತಿಯ ಕಾರಣಕ್ಕಾಗಿ ಕ್ರಮೇಣ ಸವಕಲಾಗುತ್ತಿದೆ. ಏಕೆಂದರೆ ಪ್ರಭುತ್ವದ ಎಲ್ಲಾ ದೌರ್ಜನ್ಯಗಳನ್ನು ಮತ್ತು ಕ್ರೌರ್ಯವನ್ನು ಕ್ರಮೇಣ ವ್ಯವಸ್ಥೆಯು ಕೈಗೆತ್ತಿಕೊಳ್ಳುತ್ತದೆ. ಒಮ್ಮೆ ವ್ಯವಸ್ಥೆ ತನ್ನ ಹಾದಿಯಲ್ಲಿದೆ ಎಂದು ಗೊತ್ತಾದೊಡನೆ ಪ್ರಭುತ್ವ ಮತ್ತು ವ್ಯವಸ್ಥೆಯ ನಡುವಿನ ಹೆಣಿಗೆ ಊಹೆಗೂ ನಿಲುಕುವುದಿಲ್ಲ. ಇಲ್ಲಿ ನಾವು ಯುರೋಪಿಯನ್ ರಾಷ್ಟ್ರಗಳಿಂದ ಕಡತಂದ ಪ್ರಭುತ್ವದ ಪದಬಳಕೆಯನ್ನು KSP Recruitment 2015ಅದರ ಮೂಲ ಅರ್ಥದಲ್ಲಿ ಬಳಸಿದರೆ ಅಷ್ಟರಮಟ್ಟಿಗೆ ನಮ್ಮನ್ನು ಕತ್ತಲಲ್ಲಿ ಕೂಡಿ ಹಾಕಿಕೊಳ್ಳುತ್ತೇವೆ ಅಷ್ಟೆ. ಪಶ್ಚಿಮ ರಾಷ್ಟ್ರಗಳಲ್ಲಿ ಪ್ರಭುತ್ವದ ದೌರ್ಜನ್ಯಗಳು ವ್ಯವಸ್ಥೆಯ ಮನಸ್ಥಿತಿಯೊಂದಿಗೆ ಪರಸ್ಪರ ತಾಳೆಯಾಗುವ ರೀತಿಯೇ ಬೇರೆ ಅಥವಾ ಅನೇಕ ಬಾರಿ ಹೊಂದಿಕೊಂಡಿರುವುದಿಲ್ಲ. ಆದರೆ ಏಷ್ಯಾ ರಾಷ್ಟ್ರಗಳಲ್ಲಿ ಅದರಲ್ಲೂ ಭಾರತದಂತಹ ದೇಶದಲ್ಲಿ ಪ್ರಭುತ್ವದ ಕಣ್ಸನ್ನೆಯನ್ನು ವ್ಯವಸ್ಥೆ ಪಾಲಿಸುತ್ತಿರುತ್ತದೆ ಅಥವಾ ವ್ಯವಸ್ಥೆ ಪ್ರಭುತ್ವದ ಬಹುಪಾಲು ಕೆಲಸಗಳನ್ನು ಸ್ವತಃ ತಾನೇ ಕೈಗೆತ್ತಿಕೊಳ್ಳುತ್ತದೆ. ನಾವು ಇಂಡಿಯಾದಲ್ಲಿ ಬದುಕುತ್ತಾ ಕೇವಲ ಪ್ರಭುತ್ವವನ್ನು ಹೊಣೆಗಾರಿಕೆ ಮಾಡುವುದು ಬೇಜವಬ್ದಾರಿತನವಷ್ಟೆ.

ರೋಹಿತ ವೇಮುಲನ ಹತ್ಯೆ ವ್ಯವಸ್ಥೆಯ ಮೂಲಕ ನಡೆದ ಹತ್ಯೆ. ಕೆಲ್ವಿನ್ ಮಣಿ, ಲಕ್ಷ್ಮಣಪುರ ಬಾತೆ, ಕರಂಚೇಡು, ಕಂಬಾಲಪಲ್ಲಿ, ಖೈರ್ಲಾಂಜಿಯಲ್ಲಿ ದಲಿತರ ಕೊಲೆ ಮತ್ತು ಹತ್ಯಾಕಾಂಡವನ್ನು ವ್ಯವಸ್ಥೆ ಮುಂಚೂಣಿಯಲ್ಲಿ ನಿಂತು ನಡೆಸಿತ್ತು. ಪ್ರಭುತ್ವ ತನ್ನ ಮೌನ ಬೆಂಬಲ ನೀಡಿತ್ತು. 1984ರ ಸಿಖ್‌ರ ಹತ್ಯಾಕಾಂಡ ವ್ಯವಸ್ಥೆ ನಡೆಸಿದ ಹತ್ಯಾಕಾಂಡ. ಪ್ರಭುತ್ವ ನೇರ ಬೆಂಬಲ ಸೂಚಿಸಿತ್ತು. 2002ರ ಗುಜರಾತ್ ಹತ್ಯಾಕಾಂಡದಲ್ಲಿ ಅಲ್ಲಿನ ವ್ಯವಸ್ಥೆ ಮುಂಚೂಣಿಯಲ್ಲಿದ್ದರೆ ಪ್ರಭುತ್ವವು ಅದರ ಬೆಂಬಲವಾಗಿ ಬೆನ್ನ ಹಿಂದಿತ್ತು. naveen-soorinjeಇಂತಹ ನೂರಾರು ಉದಾಹರಣೆಗಳನ್ನು ಕೊಡಬಹುದು. ಅಷ್ಟೇಕೆ ಸ್ವತಃ ನವೀನ್ ಸೂರಿಂಜೆಯವರನ್ನು ಹೋಮ್ ಸ್ಟೇ ಪ್ರಕರಣದಲ್ಲಿ ಬಂದಿಸಿದ್ದು ಪ್ರಭುತ್ವವಾದರೂ ಅವರನ್ನು ತಪ್ಪಿತಸ್ಥರೆಂದು ಅಪಪ್ರಚಾರ ಮಾಡಿದ್ದು ಅಲ್ಲಿನ ಮತೀಯವಾದಿ ವ್ಯವಸ್ಥೆ. ನಾವು ಪ್ರಭುತ್ವ ಮತ್ತು ವ್ಯವಸ್ಥೆಯ ನಡುವಿನ ಈ ಸಂಕೀರ್ಣ ಆದರೆ ಅಪಾಯಕಾರಿ ಹೊಂದಾಣಿಕೆಯ, ಬದಲಾಗುತ್ತಿರುವ ಹೊಣೆಗಾರಿಕೆಯ ಅರಿವಿಲ್ಲದೆ ಮಾತನಾಡಿದರೆ ಹಾದಿ ತಪ್ಪಿದಂತೆಯೇ.

ಏಕೆಂದರೆ ನವೀನ್ ಅವರು ನೇರವಾಗಿ ಪೋಲೀಸ್ ವ್ಯವಸ್ಥೆಯನ್ನು ಪ್ರಭುತ್ವದ ರೂಪದಲ್ಲಿ ನೋಡುತ್ತಾ ಅಲ್ಲಿನ ಶ್ರೇಣೀಕೃತ ವ್ಯವಸ್ಥೆಯಾದ ಕಮೀಷನರ್, ಇನ್ಸ್‍ಪೆಕ್ಟರ್ ಜನರಲ್, ಡಿಸಿಪಿ, ಎಸಿಪಿ ಜೊತೆಜೊತೆಗೆ ಕಾನ್ಸಟೇಬಲ್ ಮತ್ತು  ಆರ್ಡಲೀಗಳನ್ನು ಪ್ರತಿಭಟನೆಯ ಹಿನ್ನೆಲೆಯಲ್ಲಿ ಒಂದೇ ತಕ್ಕಡಿಯಲ್ಲಿ ತೂಗಿರುವುದೇ ದೋಷಪೂರಿತವಾದದ್ದು. ಏಕೆಂದರೆ ಜೂನ್ 4ರಂದು ಪ್ರತಿಭಟನೆ ಮಾಡುತ್ತಿರುವವರು ಕೆಳ ಶ್ರೇಣಿಯ ಕಾನ್ಸಟೇಬಲ್ ಮತ್ತು  ಆರ್ಡಲೀಗಳು. ಅವರನ್ನು ಪ್ರಭುತ್ವವೆಂದು ನೋಡುವುದೇ ನಮಗೆ ನಾವು ಮಿತಿಯನ್ನು ಹಾಕಿಕೊಂಡಂತೆ. ಅವರಿಗೆ ಕೆಲಸಕ್ಕೆ ಸೇರುವಾಗ ಪೋಲೀಸ್ ವ್ಯವಸ್ಥೆಯ ನಿಯಮಗಳ ಅರಿವಿರಲಿಲ್ಲವೇ, ಅದು ಅನಿವಾರ್ಯವೆಂದು ಗೊತ್ತಿಲ್ಲವೇ ಎಂದು ನವೀನ್ ಪ್ರಶ್ನಿಸುತ್ತಾರೆಂದರೆ karnataka-policeನನಗೆ ಅಶ್ಚರ್ಯವಾಗುತ್ತದೆ. ಪ್ರೊಲಿಟರೇಯನ್ ಬದುಕು ಹೇಗೆ ಮತ್ತು ಯಾವ ರೀತಿ ರೂಪುಗೊಳ್ಳುತ್ತಾ ಹೋಗುತ್ತದೆ ಎಂದು ಗೊತ್ತಿದ್ದೂ ನವೀನ್ ಈ ಪ್ರಶ್ನೆ ಎತ್ತಿದ್ದು ದರ್ಪದಂತೆ ಕಾಣುತ್ತದೆ. ಏಕೆಂದರೆ ಕಾರ್ಖಾನೆಗೆ ಕೆಲಸಕ್ಕೆ ಸೇರಿಕೊಳ್ಳುವ ಕಾರ್ಮಿಕರಿಗೂ ಅಲ್ಲಿನ ಬಂಡವಾಳಶಾಹಿ ಮಾಲೀಕನ ಎಲ್ಲಾ ದೌರ್ಜನ್ಯಗಳ, ಕ್ರೌರ್ಯದ ಪರಿಚಯವಿರುತ್ತದೆ. ಆದರೆ ಕಾರ್ಮಿಕರಿಗೆ ನಿನಗೆ ಗೊತ್ತಿದ್ದೂ ಹೇಗೆ ಸೇರಿಕೊಂಡೆ, ಅಲ್ಲಿ ಸೇರಿಕೊಂಡು ಮಾಲೀಕನ ವಿರುದ್ಧ ಪ್ರತಿಭಟಿಸುವುದೂ ಅನ್ಯಾಯ ಎನ್ನುವುದೇ ಅಮಾನವೀಯ. ಪ್ರೊಲಿಟೇರಿಯನ್‌ನ ಬದುಕು ಅವದಾಗಿರುವುದಿಲ್ಲ. ಅವನ ಆಯ್ಕೆ ಅವನದಾಗಿರುವುದಿಲ್ಲ. ಆವನ ನಡತೆ ಅವನದಾಗಿರುವುದಿಲ್ಲ. ವ್ಯವಸ್ಥೆ ಅವನಿಗೆ ಕನಿಷ್ಠ ಮಾನವಂತನಾಗಿ ಬದುಕಲು ಬಿಡಲಾರದಷ್ಟು ಕಟುವಾಗಿರುತ್ತದೆ. ನವೀನ್ ಹೇಳುವ ಹತ್ತನೇ ತರಗತಿ ಓದಿನ ಕಾನ್ಸಟೇಬಲ್‌ಗಳು ಮತ್ತು ಆರ್ಡಲೀಗಳನ್ನು ಈ ಹಿನ್ನೆಲೆಯಲ್ಲಿ ನೋಡಬೇಕು. ಅನಿವಾರ್ಯ ಆಯ್ಕೆಗೆ ಬಲಿಯಾಗಿ ಪೋಲೀಸ್ ವ್ಯವಸ್ಥೆಗೆ ಸೇರಿಕೊಳ್ಳುತ್ತಾನೆ. ಅದರ ಭಾಗವಾಗುತ್ತಾನೆ. ಕ್ರೌರ್ಯಕ್ಕೆ ಬಲಿಯಾಗುತ್ತಾನೆ. ಕ್ರೌರ್ಯದ ಮುಖವಾಗುತ್ತಾನೆ. ಇದಕ್ಕೆ ಅತ್ಯುತ್ತಮ ಉದಾಹರಣೆಯಾಗಿ ಗೋವಿಂದ ನಿಹಾಲನಿಯವರ “ಅರ್ಧಸತ್ಯ” ಸಿನಿಮಾವನ್ನು ನೋಡಲೇಬೇಕು. ಆ ಸಿನಿಮಾದಲ್ಲಿ ಬಳಸಿಕೊಂಡ ಖ್ಯಾತ ಮರಾಠಿ ಕವಿ ದಿಪೀಪ್ ಚಿತ್ರೆ ಬರೆದ ಕೆಲ ಸಾಲುಗಳು ಹೀಗಿವೆ:

ಚಕ್ರವ್ಯೂಹದ ಒಳಗಿದ್ದರೂ ಸಹಿತ
ಸಾಯುತ್ತೇನೆಯೋ ಅಥವಾ ಸಾಯಿಸುತ್ತೇನೆಯೋ
ಇದರ ಕುರಿತಾಗಿಯೂ ನಿರ್ಧರಿಸಲಾಗಲಿಲ್ಲ

ಒಂದು ಬದಿಯಲ್ಲಿ ನಪುಂಸಕತ್ವವನ್ನು
ಮತ್ತೊಂದು ಬದಿಯಲ್ಲಿ ಪುರುಷತ್ವದೊಂದಿಗೆ ಸಮವಾಗಿ ತೂಗುತ್ತ
ನ್ಯಾಯ ತಕ್ಕಡಿಯ ಈ ಮೊನೆಯು
ನಮಗೆ ಅರ್ಧಸತ್ಯದ ಕಡೆಗೆ ಬೆರಳು ತೋರಿಸುತ್ತದೆ

ಇಡೀ ಪೋಲೀಸ್ ವ್ಯವಸ್ಥೆ ಪ್ರಭುತ್ವದ ಅಡಿಯಲ್ಲಿ “ಒಂದು ಬದಿಯಲ್ಲಿ ನಪುಂಸಕತ್ವ ಮತ್ತೊಂದು ಬದಿಯಲ್ಲಿ ಪುರುಷತ್ವದೊಡನೆ ತೂಗುತ್ತಿರುತ್ತದೆ.” ಇದರ ಮೊದಲ ಮತ್ತು ನಿರಂತರ ಬಲಿಪಶುಗಳು ಪೋಲೀಸ್ ಪೇದೆಗಳು ಮತ್ತು ಕೆಳಹಂತದ ಅಧಿಕಾರಿಗಳು. ಅವರು ಠಾಣೆಯಲ್ಲಿ ನಿರಪರಾಧಿ ಕೈದಿಗಳ ಮೇಲೆ ನಡೆಸುವ ದೌರ್ಜನ್ಯ, ಲಾಕಪ್ ಡೆತ್, ಪ್ರತಿಭಟನೆಕಾರರ ಮೇಲೆ ನಡೆಸುವ ಹಲ್ಲೆಗಳು, ಗೋಲೀಬಾರು, ನಕಲಿ ಎನ್‌ಕೌಂಟರ್‌ಗಳು, Ardh_Satya,_1982_fimಎಲ್ಲವೂ ವ್ಯವಸ್ಥೆಯ ಪ್ರತಿನಿಧಿಯಾಗಿ ನಡೆಸುತ್ತಾರೆ ಹೊರತಾಗಿ ಪ್ರಭುತ್ವದ ಪ್ರತಿನಿಧಿಯಾಗಿ ಅಲ್ಲವೇ ಅಲ್ಲ. ನಂತರ ತಮ್ಮ ಕೃತ್ಯಗಳಿಗೆ ಪ್ರಭುತ್ವನ್ನು ಗುರಾಣಿಯಂತೆ ಬಳಸಿಕೊಳ್ಳುತ್ತಾರೆ. ಇದನ್ನು ನಿಹಾಲನಿ ಅರ್ಧಸತ್ಯ ಸಿನಿಮಾದಲ್ಲಿ ಸಮರ್ಥವಾಗಿ ಕಟ್ಟಿದ್ದಾರೆ. ಇತ್ತೀಚೆಗೆ ಪತ್ರಕರ್ತೆ ರಾಣಾ ಅಯೂಬ್ ಅವರ “ಗುಜರಾತ್ ಫೈಲ್ಸ್” ಎನ್ನುವ ಪುಸ್ತಕ ಬಿಡುಗಡೆಯಾಗಿದೆ. ಅದರಲ್ಲಿ ಅವರು 2002 ರ ಮುಸ್ಲಿಂ ಹತ್ಯಾಕಾಂಡ, ಇಶ್ರಾನ್ ಎನ್‌ಕೌಂಟರ್, ಸೊಹ್ರಾಬುದ್ದೀನ್ ಎನ್‌ಕೌಂಟರ್‌ನ ಸಂದರ್ಭಗಳ ಮತ್ತು ಆ ನಂತರದ ದಿನಗಳ ತಮ್ಮ ಅನುಭವಗಳನ್ನು ಬಿಚ್ಚಿಟ್ಟಿದ್ದಾರೆ. ಅದು ನಿಜಕ್ಕೂ ಮೈ ನಡುಗಿಸುತ್ತದೆ. ಅಲ್ಲಿನ ಬಹುತೇಕ ಪೋಲೀಸ್ ಅಧಿಕಾರಗಳು ತಳ ಸಮುದಾಯದಿಂದ ಬಂದವರು. ವ್ಯವಸ್ಥೆಯ ಭಾಗವಾಗಿಯೇ ಗುಜರಾತ್ ಹತ್ಯಾಕಾಂಡ ಮತ್ತು ಎನ್‌ಕೌಂಟರ್‌ಗಳಲ್ಲಿ ಭಾಗಿಯಾಗುತ್ತಾರೆ ಮತ್ತು ಪ್ರಭುತ್ವದ ದಾಳವಾಗಿ ಬಳಕೆಯಾಗುತ್ತಾರೆ. ಪ್ರಭುತ್ವ ಮತ್ತು ವ್ಯವಸ್ಥೆಯ ನಡುವಿನ ಸಂಕೀರ್ಣ ಸಂಬಂಧಗಳನ್ನು ಈ ಪುಸ್ತಕದಲ್ಲಿ ತಮ್ಮ ಪತ್ರಕರ್ತರ ಅನುಭವದ ಮೂಲಕ ರಾಣಾ ಅಯೂಬ್ ಸಮರ್ಥವಾಗಿ ತೋರಿಸಿದ್ದಾರೆ.

ಹೀಗಾಗಿ ನವೀನ್ ಅವರು ಪೋಲೀಸ್ ವ್ಯವಸ್ಥೆಯನ್ನು ಏಕಪಕ್ಷೀಯವಾಗಿ ಪ್ರಭುತ್ವದ ಸ್ಥಾನದಲ್ಲಿ ನಿಲ್ಲಿಸಿಕೊಂಡು ವಿಮರ್ಶಿಸತೊಡಗಿದೊಡನೆ ಸ್ವತ ತಮಗೆ ತಾವೇ ಲಕ್ಷ್ಮಣರೇಖೆಯನ್ನು ಎಳೆದುಕೊಂಡುಬಿಡುತ್ತಾರೆ. ಹೀಗಾಗಿಯೇ ಎಡಪಂಥೀಯರು ಪ್ರಭುತ್ವವನ್ನು ಸಂತ್ರಸ್ಥರ ಸ್ಥಾನದಲ್ಲಿ ನಿಲ್ಲಿಸುತ್ತಿದೆ ಎಂದು ತಪ್ಪಾಗಿ ಅರ್ಥೈಸುತ್ತಾರೆ. ಮಸಲ ನಾಳೆ ಯು.ಟಿ.ಖಾದರ್‌ಗೆ ಅನ್ಯಾಯವಾದಾಗ ಅವರ ಪರವಾಗಿ ಸಮರ್ಥನೆಗೆ ನಿಂತಾಗ ನಾವು ಪ್ರಭುತ್ವವನ್ನು ಬೆಂಬಲಿಸಿದಂತಾಗುತ್ತದೆಯೇ? ಅಥವಾ ಮಂಗಳೂರಿನ ಡಿ.ಸಿ.ಇಬ್ರಾಹಿಂ ಅವರಿಗೆ ಆದ ಅನ್ಯಾಯವನ್ನು ಪ್ರತಿಭಟಿಸಿದರೆ ಅದು ಪ್ರಭುತ್ವವನ್ನು ಸಂತ್ರಸ್ಥರನ್ನಾಗಿಸುತ್ತದೆಯೇ?

ಇನ್ನು ಪೋಲೀಸರ ಬೇಡಿಕೆಗಳ ಕುರಿತಾಗಿ ಅವರ ಸಂಬಳದ ಕುರಿತಾಗಿ ಮಾತನಾಡುವುದು ಔಚಿತ್ಯವೇ ಅಲ್ಲ. ಅಲ್ಲರೀ ದಿನವಿಡೀ ಬಿಸಿಲಲ್ಲಿ ದುಡಿಯುವವನಿಗೆ ನಿನಗೆ 18000 ಸಂಬಳ ಸಾಕಲ್ವೇನಯ್ಯ ಎಂದು ನವೀನ್ ಹೇಳುತ್ತಾರೆಂದು ನಾನು ನೆನಸಿರಲಿಲ್ಲ.

ಕಡೆಯದಾಗಿ ಪೋಲೀಸ್ ವ್ಯವಸ್ಥೆಯಿಂದ ನಡೆಯುವ ಮಾನವ ಹಕ್ಕುಗಳ ಉಲ್ಲಂಘನೆಯನ್ನು,ದೌರ್ಜನ್ಯವನ್ನು,ಹತ್ಯಾಕಾಂಡಗಳನ್ನು ಈ ಪೇದೆಗಳು ಮತ್ತು ಆರ್ಡಲೀಗಳು ನಡೆಸುತ್ತಿರುವ ಪ್ರತಿಭಟನೆಗೆ ತಳುಕು ಹಾಕುವುದು ಸಂಪೂರ್ಣವಾಗಿ ಅರ್ಥಹೀನ ಮತ್ತು ಅಮಾನವೀಯ.

3 thoughts on “ಪೋಲೀಸ್ ಪ್ರತಿಭಟನೆ : ಒಂದು ಬದಿಯಲ್ಲಿ ನಪುಂಸಕತ್ವ, ಮತ್ತೊಂದು ಬದಿಯಲ್ಲಿ ಪುರುಷತ್ವ

  1. Anonymous

    ಲೇಖಕರಿಗೆ ಧನ್ಯವಾದಗಳು. ಇವತ್ತು ಪೋಲಿಸ್ ಕೆಲಸಕ್ಕೆ ಸೇರುತ್ತಿರುವವರು ಪದವಿ, ಸ್ನಾತಕೋತ್ತರ ಪದವಿದರರೇ ಹೆಚ್ಚು. ಅಲ್ಲದೆ ಗೌರವದ ಬದುಕಿಗೆ ಬಹಳಷ್ಟು ಪೋಲಿಸರು ಬಯಸುತ್ತಿರುವುದು ಸತ್ಯ.

    Reply
  2. Ananda Prasad

    ಪೋಲೀಸರನ್ನು ಮೇಲಧಿಕಾರಿಗಳ ಮನೆಗೆಲಸಕ್ಕೆ ಬಳಸುವ ಊಳಿಗಮಾನ್ಯ ವ್ಯವಸ್ಥೆಯನ್ನು ಸಂಪೂರ್ಣವಾಗಿ ತೊಡೆದುಹಾಕಬೇಕಾದ ಅಗತ್ಯ ಇದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂಥ ಬ್ರಿಟಿಷ್ ಕಾಲದ ಪಳೆಯುಳಿಕೆಯ ನಿಯಮಗಳನ್ನು ಉಳಿಸಿಕೊಳ್ಳಲು ಸಂಬಂಧಪಟ್ಟ ವ್ಯಕ್ತಿಗಳಿಗೆ ಕನಿಷ್ಠ ನಾಚಿಕೆಯೂ ಆಗುವುದಿಲ್ಲವೇ? ಉನ್ನತ ಹುದ್ದೆಯಲ್ಲಿರುವ ಮೇಲಧಿಕಾರಿಗಳಿಗೆ ಸಾಕಷ್ಟು ವೇತನ ಇರುವಾಗ ಅವರ ಮನೆಗೆಲಸ ಮಾಡಲು ಅವರೇ ಖಾಸಗಿ ವ್ಯಕ್ತಿಗಳನ್ನು ನೇಮಿಸಿಕೊಳ್ಳಬೇಕೇ ಹೊರತು ಜನರ ತೆರಿಗೆಯ ಹಣ ಬಳಸಿ ಸಂಬಳ ಸರ್ಕಾರಿ ಸಂಬಳ ಪಡೆಯುವ ಪೋಲೀಸರನ್ನು ಬಳಸಿಕೊಳ್ಳುವುದು ಪ್ರಜಾಪ್ರಭುತ್ವ ವ್ಯವಸ್ಥೆಗೇ ನಾಚಿಕೆಗೇಡು. ಈ ಕೆಟ್ಟ ವ್ಯವಸ್ಥೆಯನ್ನು ಸಂಪೂರ್ಣವಾಗಿ ತೆಗೆದುಹಾಕಲು ಸರ್ಕಾರದ ಮೇಲೆ ಜನರು ತೀವ್ರ ಒತ್ತಾಯ ತರಬೇಕಾಗಿದೆ.

    Reply
  3. ganesh

    ಮೊದಲು ನವೀನ ಸಾರಿಂಜೆ ಬರಹ ೋದಿ. ಬರಹಕ್ಕೆ ಸಂಬಂಧಪಡದ ವಿಚಾರಗಳನ್ನೇ ಬರೆದಿದ್ದೀರಿ. ಪೊಲೀಸ್ ಪೇದೆಗೆ 18 ಸಾವಿರ ಸಾಕು ಎಂದು ಹೇಳಿಲ್ಲ ಻ಲ್ಲಿ. ಅಲ್ಲಿ ಹೇಳಿರೋದು 18 ಸಾವಿರದಿಂದ ಪ್ರಾರಂಭವಾಗುತ್ತದೆ ಎಂಬುದು. ಅದು ಹೆಚ್ಚಳ ಾಗುತ್ತಾ 60 ಸಾವಿರದವರೆಗೂ ಹೋಗುತ್ತೆ ಎಂದು ವಿವರಿಸಬೇಕು ಎಂದು ಪಾಪ ಸಾರಿಂಜೆಗೆ ಗೊತ್ತಿರಲಿಲ್ಲ ೆಂದು ಕಾಣುತ್ತದೆ. ಯಾರೋ ಪೊಲೀಸರು ನಡೆಸುವ ಻ನಾಚಾರಗಳು ಎಂಬುದು ಬಾಲಿಶ. ಪೊಲೀಸರದ್ದು ಸಂಘಟಿತ ಻ಪರಾಧ. ಸಂಘಟಿತ ಭ್ರಷ್ಟಾಚಾರ. ಸಂಘಟಿತ ದಾಳಿ. ಇಷ್ಟು ಸಿಲ್ಲಿಯಾಗಿ ನೀವು ಪೊಲೀಸರನ್ನು ತೆಗೆದುಕೊಳ್ತೀರಿ ಎಂದರೆ ನೀವು ಬ್ರಾಹ್ಮಣರೇ ಇರಬೇಕು ಬಿಡಿ.
    -ಗಣೇಶ್

    Reply

Leave a Reply to Ananda Prasad Cancel reply

Your email address will not be published. Required fields are marked *