ದಲಿತರು ಮತ್ತು ಉದ್ಯಮಶೀಲತೆ…

ಸ್ನೇಹಿತರೇ, ವರ್ತಮಾನ.ಕಾಮ್‌ಗೆ ಎರಡು ವರ್ಷ ತುಂಬಿದ ಸಂದರ್ಭದಲ್ಲಿ ವ್ಯಕ್ತಪಡಿಸಿದ ಆಶಯದಂತೆ ವರ್ತಮಾನ.ಕಾಮ್ ಬಳಗ ಇತರೆ ಸಮಾನಮನಸ್ಕ ಗುಂಪು ಮತ್ತು ಸಂಘಟನೆಗಳ ಜೊತೆಗೂಡಿ ರಾಜ್ಯದ ಹಲವು ಕಡೆ ಸಂವಾದ ಮತ್ತು ವಿಚಾರಸಂಕಿರಣಗಳನ್ನು ಆಯೋಜಿಸಲು ಪ್ರಯತ್ನಿಸುತ್ತಿದೆ. ಮೊದಲ ಕಾರ್ಯಕ್ರಮ ಹಾಸನದಲ್ಲಿ ಇದೇ ಶನಿವಾರ (07-09-2013) ನಡೆಯುತ್ತಿದೆ. ವಿಷಯ: “ದಲಿತರು ಮತ್ತು ಉದ್ಯಮಶೀಲತೆ”. ದಲಿತರು ಉದ್ಯಮಿಗಳಾಗಬೇಕೆ ಬೇಡವೆ, ಅವರೂ ಅಂತಿಮವಾಗಿ ಬಂಡವಾಳಶಾಹಿಯ ಶೋಷಕವರ್ಗದ ಪಾಲುದಾರರಾಗಬೇಕೆ, ಎನ್ನುವುದರಿಂದ ಹಿಡಿದು ಹೆಚ್ಚಿನ ಸಂಖ್ಯೆಯಲ್ಲಿ ದಲಿತರು ಉದ್ಯಮಿಗಳಾಗಲು ಇರುವ ಅಡೆತಡೆಗಳೇನು, ಬಂಡವಾಳ ಹೂಡಿಕೆ ಯಾರಿಂದ, ಇತ್ಯಾದಿ […]

ದಲಿತರು ಮತ್ತು ಸ್ವಾವಲಂಬನೆ – ತಿಪಟೂರಿನಲ್ಲಿ : ಸೆಪ್ಟೆಂಬರ್ 6, 2014

ಸ್ನೇಹಿತರೇ, ವರ್ತಮಾನ.ಕಾಮ್ ಕಳೆದ ಒಂದು ವರ್ಷದಲ್ಲಿ ರಾಜ್ಯದ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ “ದಲಿತರು ಮತ್ತು ಉದ್ಯಮಶೀಲತೆ” ವಿಷಯವಾಗಿ ಹಾಸನ, ತುಮಕೂರು, ಮತ್ತು ಮೈಸೂರಿನಲ್ಲಿ ವಿಚಾರಸಂಕಿರಣವನ್ನು ಏರ್ಪಡಿಸಿದ್ದು ತಮಗೆಲ್ಲ ತಿಳಿದಿದೆ. ಅದರ ಮುಂದುವರಿದ ಭಾಗವಾಗಿ ಇದೇ ಶನಿವಾರದಂದು (06-o9-2014) ತುಮಕೂರು ಜಿಲ್ಲೆಯ ತಿಪಟೂರು ನಗರದಲ್ಲಿ ಅಲ್ಲಿಯ “ದಲಿತ ಸಾಹಿತ್ಯ ಪರಿಷತ್” ಮತ್ತು “ಸ್ನೇಹ ಜ್ಯೋತಿ ರೂರಲ್ ಡೆವಲಪ್‌ಮೆಂಟ್ ಸೊಸೈಟಿ”ಯವರ ಸಂಯುಕ್ತಾಶ್ರಯದಲ್ಲಿ “ದಲಿತರು ಮತ್ತು ಸ್ವಾವಲಂಬನೆ” ವಿಚಾರವಾಗಿ ಒಂದು ದಿನದ ಕಾರ್ಯಾಗಾರ ಮತ್ತು ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ತಿಪಟೂರು ಸಾಹಿತ್ಯಕವಾಗಿ, ಸಾಂಸ್ಕೃತಿಕವಾಗಿ, […]

3ನೇ ವಾರ್ಷಿಕದಂದು ವರ್ತಮಾನ.ಕಾಮ್‌ನ ಪ್ರಸ್ತುತತೆ ..

ಸ್ನೇಹಿತರೇ, ವರ್ತಮಾನ.ಕಾಮ್ ಕಾರ್ಯಾರಂಭಿಸಿ ಮೂರು ವರ್ಷಗಳು ತುಂಬಿದವು. (ಮೊದಲನೆಯ ಮತ್ತು ಎರಡನೆಯ ವಾರ್ಷಿಕದಂದು ಬರೆದಿದ್ದ ಟಿಪ್ಪಣಿಗಳು ಇಲ್ಲಿ ಮತ್ತು ಇಲ್ಲಿ ಇವೆ. ಗಮನಿಸಿ.) ಮೂರನೆಯ ವರ್ಷದಲ್ಲಿ ವರ್ತಮಾನ.ಕಾಮ್ ಎಲ್ಲಾ ತರಹದ ಏರಿಳಿತಗಳನ್ನು ಕಂಡಿತು. 2013  ರ ಅಕ್ಟೋಬರ್, ನವೆಂಬರ್ ಮತ್ತು 2014ರ ಮಾರ್ಚ್‌ ತಿಂಗಳುಗಳು ಹಿಂದಿನ ಎಲ್ಲಾ ತಿಂಗಳುಗಳಿಗಿಂತ ಹೆಚ್ಚಿನ ಓದನ್ನು ಪಡೆದುಕೊಂಡ ತಿಂಗಳುಗಳಾದರೆ 2014 ರ ಜೂನ್ ತಿಂಗಳು ಕಳೆದ ಎರಡು ವರ್ಷಗಳಲ್ಲಿಯೇ ಕಡಿಮೆ ಓದು ಪಡೆದುಕೊಂಡ ತಿಂಗಳು. ಈ ನಿಟ್ಟಿನಲ್ಲಿ ಇದು ವರ್ತಮಾನ.ಕಾಮ್‌ನ ಯಶಸ್ವಿ ವರ್ಷವೂ ಹೌದು. […]

ವರ್ತಮಾನ.ಕಾಮ್‌ನ 2013 ಭೂತಕಾಲ

– ರವಿ ಕೃಷ್ಣಾರೆಡ್ಡಿ   2012 ಆರಂಭವಾದಾಗ ನಮ್ಮ ಆಶಾವಾದಗಳು ಆಕಾಶದಲ್ಲಿ ಹಾರುತ್ತಿದ್ದವು. ಆ ವರ್ಷದ ಆರಂಭದಲ್ಲಿ ನಾನು ಬರೆದ “2012 – ಪಲ್ಲಟಗಳ ವರ್ಷದಲ್ಲಿ ವರ್ತಮಾನ” ಎಂಬ ಲೇಖನದಲ್ಲಿ ಅದಕ್ಕೆ ಕಾರಣಗಳನ್ನು ನೀವು ಗುರುತಿಸಬಹುದು. ಹಾಗೆ ನೋಡಿದರೆ 2012 ರಲ್ಲಿ ಅಂತಹ ದೊಡ್ಡ ಬದಲಾವಣೆಗಳಾಗಲಿಲ್ಲ. ಆದರೆ ಮುಂದಿನ ವರ್ಷ, ಅಂದರೆ 2013 ರಲ್ಲಿ, ಈ ದೇಶ ಪಡೆದುಕೊಂಡ ತಿರುವುಗಳ ಬೀಜಗಳೆಲ್ಲ 2012 ರಲ್ಲಿ ಬಿತ್ತಲ್ಪಟ್ಟವು ಎನ್ನುವುದನ್ನು ನಾವು ಮರೆಯಬಾರದು. 2013 ಈ ದೇಶವಾಸಿಗಳಲ್ಲಿ ಹೊಸ ಹುಮ್ಮಸ್ಸನ್ನು, […]